ಡಿವಿಜಿ ಸುದ್ದಿ, ದಾವಣಗೆರೆ: ಡಿವಿಜಿ ಸುದ್ದಿ, ದಾವಣಗೆರೆ: ಕುರುಬ ಸಮುದಾಯವನ್ನು ಎಸ್ಟಿ ಮೀಸಲಾತಿ ಸೇರಿಸುವಂತೆ ಆಗ್ರಹಿಸಿ ಜನವರಿ 15 ರಿಂದ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಕಾಗಿನಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಹರಿಹರ ತಾಲೂಕಿನ ಬೆಳ್ಳೂಡಿಯ ಕಾಗಿನೆಲೆ ಗುರುಪೀಠದ ಶಾಖಾ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿದರು. ಹಾವೇರಿ ಜಿಲ್ಲೆಯ ಕಾಗಿನಲೆ ಗುರುಪೀಠದಿಂದ ಜ.15 ರಂದು ಬೆಂಗಳೂರಿಗೆ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಪಾದಯಾತ್ರೆಗೂ ಮುನ್ನ ರಾಜ್ಯದ ನಾಲ್ಕು ಕಡೆ ಸಮಾವೇಶ ನಡೆಸಲಾಗುವುದು ಎಂದರು.
ದಾವಣಗೆರೆ, ಗುಲ್ಬರ್ಗ, ಮೈಸೂರು, ಬಾಗಲಕೋಟೆಯಲ್ಲಿ ಸಮಾವೇಶ ನಡೆಸಲಾಗುವುದು ಈ ಬಗ್ಗೆ ಸಮಾಜ ಬಾಂಧವರೊಂದಿಗೆ ಚರ್ಚಿಸಲಾಗಿದೆ. ನವೆಂಬರ್ 8 ಕ್ಕೆ ಹಾವೇರಿಯ ಕಾಗಿನಲೆಯಲ್ಲಿ ಮಹಿಳಾ ಸಮವೇಶ ಜರುಗಲಿದೆ. ಪಾದಯಾತ್ರೆ ನಂತರ ಬೆಂಗಳೂರಿನಲ್ಲಿ ಫೆಬ್ರವರಿ 7 ರಂದು ಬೃಹತ್ ಸಮಾವೇಶ ಮಾಡಲು ಸಿದ್ದತೆಗಳು ನಡೆದಿದೆ. ಕುರುಬ ಸಮಾಜವನ್ನು ಎಸ್ ಟಿ ಗೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿ ಹತ್ತು ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದರು.ಈ ವೇಳೆ ಮಾಜಿ ಸಚಿವ ಎಚ್. ಎಂ. ರೇವಣ್ಣ ಉಪಸ್ಥಿತರಿದ್ದರು.



