ಡಿವಿಜಿ ಸುದ್ದಿ, ತುಮಕೂರು: ಶಿರಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಟಿ.ಬಿ.ಜಯಚಂದ್ರ ಮುದಿ ಎತ್ತಾಗಿದ್ದು, ನಮ್ಮ ಪಕ್ಷದ ಅಭ್ಯರ್ಥಿ ರಾಜೇಶ್ ಗೌಡ ಯುವ ಎತ್ತು ಎಂದು ರಾಜ್ಯ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪುಟ್ಟಸ್ವಾಮಿ, ಯುವ ಎತ್ತಿಗೆ ಶಿರಾ ಜನತೆ ಮತ ನೀಡಿದ್ರೆ ಪ್ರಯೋಜನೆ. ಏಳು ಬಾರಿ ಗೆದ್ದಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿಯಾಗಿರುವ ರಾಜೇಶ್ ಗೌಡ ಯುವಕರು. ಹೀಗಾಗಿ ಯುವ ಎತ್ತಿಗೆ ಮತ ನೀಡಿದ್ರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಹೆಚ್ಚಾಗುತ್ತದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ದ್ವೇಷದಿಂದಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತವಾಗಿದೆ, ಸರ್ಕಾರ ಬಿದ್ದು ಒಂದು ವರ್ಷ ಕಳೆದರೂ ಇಬ್ಬರ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಬಳಿ ಅಭಿವೃದ್ಧಿ ಮಂತ್ರ ಇಲ್ಲ. ಈ ಪಕ್ಷಗಳು ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದು ಯಾಕೆ ಅಂತಾ ಗೊತ್ತಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ವೇಳೆ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ ಇರದಿದ್ರೆ ಅಲ್ಲೋಲ ಕಲ್ಲೋಲವಾಗುತ್ತಿತ್ತು. ಸಿಎಂ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯತೆ ಮತ್ತು ಆರ್ಥಿಕ ನೆರವು ನೀಡಿದ್ದಾರೆ.



