ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಶೇ. 90 ರಷ್ಟು ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು10 ದಿನದಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಬಗ್ಗೆ ತಜ್ಞರು ಮಾಹಿತಿ ನೀಡಿದ್ದು, ನ. 15ರವರೆಗೆ ಜನರು ಹೆಚ್ಚು ಜಾಗೃತರಾಗಿರಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಡೆತ್ ರೇಟ್ ಶೇ.1 ರಷ್ಟಾಗಿದೆ. ಶೇ. 90 ರಷ್ಟು ಜನ ಗುಣಮುಖರಾಗಿದ್ದಾರೆ. ಶೇ. 4ರಷ್ಟು ಸಕ್ರಿಯ ಪ್ರಕರಣಗಳಿವೆ. ಇನ್ನು ಪ್ರತಿ ದಿನ 100ಕ್ಕಿಂತ ಕಡಿಮೆ ಕೇಸ್ ಬರುತ್ತಿವೆ ಎಂದರು.
ಜಿಲ್ಲೆಯಲ್ಲಿ ಕ್ರಿಟಿಕಲ್ ಕೇಸ್ ಗಳ ಸಂಖ್ಯೆ ಕಡಿಮೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 770 ಸಕ್ರಿಯ ಪ್ರಕರಣಗಳಿವೆ. ಇನ್ನು 10 ದಿವಸದಲ್ಲಿ ಕೇಸ್ ಗಳು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 5 ಸಾವಿರ ಕೇಸ್ ಬಂದರೂ, ಅಗತ್ಯ ಮೂಲಸೌಕರ್ಯ ಕಲ್ಪಿಸಲು ನಮ್ಮಲಿದೆ ವ್ಯವಸ್ಥೆ ಇದೆ. 770 ಆಕ್ಸಿಜನ್ ಬೆಡ್ ಇದೆ . ಸೊಂಕು ರಿಪೀಟ್ ಆಗೋ ಚಾನ್ಸ್ ಇದ್ದು, ಹೆಚ್ಚು ಜಾಗೃತಿ ವಹಿಸಬೇಕಿದೆ ಎಂದು ತಿಳಿಸಿದರು.