Connect with us

Dvgsuddi Kannada | online news portal | Kannada news online

ಕೊರೊನಾ ನಿಯಮ ಉಲ್ಲಂಘನೆ: ಶೇ.50 ರಷ್ಟು  ಬೆಡ್ ನೀಡಿದ 7 ಖಾಸಗಿ ಆಸ್ಪತ್ರೆಗೆ ಬಿಬಿಎಂಪಿ ನೋಟಿಸ್

ಪ್ರಮುಖ ಸುದ್ದಿ

ಕೊರೊನಾ ನಿಯಮ ಉಲ್ಲಂಘನೆ: ಶೇ.50 ರಷ್ಟು  ಬೆಡ್ ನೀಡಿದ 7 ಖಾಸಗಿ ಆಸ್ಪತ್ರೆಗೆ ಬಿಬಿಎಂಪಿ ನೋಟಿಸ್

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ  7 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಆಸ್ಪತ್ರೆಗಳ ಓಪಿಡಿ ಕ್ಲೋಸ್ ಮಾಡಿ, ಒಳರೋಗಿಳನ್ನು ಶಿಫ್ಟ್ ಮಾಡುವಂತೆ ಕೂಡ ಎಚ್ಚರಿಕೆ ನೀಡಿದೆ.

ಮುಂದಿನ 24 ಗಂಟೆಯಲ್ಲಿ 7 ಆಸ್ಪತ್ರೆಗಳು ನೋಟಿಸ್‍ಗೆ ಉತ್ತರಿಸಬೇಕಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಲೈಸನ್ಸ್  ರದ್ದು ಮಾಡಲಾಗುವುದು  ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಸರ್ಕಾರದ ನಿಯಮಗಳನ್ನು ಪಾಲಿಸದ ನಗರದ ರಂಗದೊರೈ ಮೆಮೊರಿಯಲ್ ಆಸ್ಪತ್ರೆ, ಸಂಜಿವಿನಿ ಆಸ್ಪತ್ರೆ, ಡಾ. ಜಿವಿಜಿ ಹೆಲ್ತ್ ಕೇರ್ ಪ್ರೈವೆಟ್ ಲಿ., ಶ್ರೀನಿವಾಸ್ ಆಸ್ಪತ್ರೆ, ಮೆಡ್ ಸ್ಟಾರ್ ಆಸ್ಪತ್ರೆ, ನಂದನ ಹೆಲ್ತ್ ಕೇರ್ ಸರ್ವಿಸ್ ಇಂಡಿಯಾ ಲಿಮಿಟೆಡ್ ಆಸ್ಪತ್ರೆಗಳಿಗೆ ನೋಟಿಸ್ ಬಿಬಿಎಂಪಿ ನೋಟಿಸ್ ನೀಡಿದೆ.

ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್,  ಶೇ.50 ರಷ್ಟು ಕೋವಿಡ್ ಬೆಡ್ ನೀಡದ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಕೋರಿದ್ದಾರೆ.  ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯ್ದೆ ಅನ್ವಯ ನೋಟಿಸ್ ನೀಡಲಾಗಿದೆ.

ನೋಟಿಸ್‍ನಲ್ಲಿ ಮುಂದಿನ ಮುಂದಿನ 48 ಗಂಟೆಗಳ ಒಳಗಾಗಿ ಸರ್ಕಾರದ ಆದೇಶದಂತೆ ಶೇ.50 ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಬೇಕು. 24 ಗಂಟೆಗಳ ಒಳಗಾಗಿ ಪಾಲಿಕೆಯ ಶೋಕಾಸ್ ನೋಟಿಸ್‍ಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top