ಡಿವಿಜಿ ಸುದ್ದಿ, ಬೆಂಗಗಳೂರು: ಉಪ ಚುನಾವಣೆ ಮುಗಿದ ನಂತರ ಸಚಿವ ಸಂಪಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆ ಮುಗಿದ ಬಳಿಕ ದೆಹಲಿಗೆ ಭೇಟಿ ನೀಡಲಿದ್ದೇನೆ. ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ನಿರ್ಧಾರವಾಗಲಿದೆ ಎಂದರು.
ಈಗಾಗಲೇ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ, ಕಾರಣಾಂತರದಿಂದ ವಿಸ್ತರಣೆ ಸಾಧ್ಯವಾಗಿರಲಿಲ್ಲ. ಇದೀಗ ಉಪ ಚುನಾವಣೆ ಬಳಿಕ ಸಂಪುಟ ಹೈಕಮಾಂಡ್ ಜೊತೆ ಚರ್ಚಿಸಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.