ನವದೆಹಲಿ: ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಚುನಾವಣೆ ನಿಗದಿಯಾಗಿದೆ.
ಈ ಕುರಿತು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದ್ದು, ರಾಯಚೂರಿನ ಬಿಜೆಪಿ ಮುಖಂಡ ಅಶೋಕ್ ಗಸ್ತಿ ಅವರು ಕೊರೊನಾದಿಂದ ಸೆಪ್ಟೆಂಬರ್‌ನಲ್ಲಿ ಮೃತಪಟ್ಟರು. ರಾಜ್ಯದಲ್ಲಿ ಮೊದಲ ಬಾರಿಗೆ ಸವಿತಾ ಸಮಾಜದಿಂದ ಅಶೋಕ ಗಸ್ತಿ ಆಯ್ಕೆಯಾಗಿದ್ದರು. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದ ಗಸ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.
ಡಿಸೆಂಬರ್ 1ರಂದು ಚುನಾವಣೆ ನಿಗದಿಯಾಗಿದ್ದು, ಅಂದು ಸಂಜೆಯೇ ಮತ ಎಣಿಕೆ ನಡೆಯಲಿದೆ. ಚುನಾವಣೆ ಸಂಬಂಧ ನವೆಂಬರ್ 11ರಂದು ಅಧಿಸೂಚನೆ ಹೊರಬರಲಿದೆ ಹಾಗೂ ನಾಮನಿರ್ದೇಶನ ಸಲ್ಲಿಕೆಗೆ ನವೆಂಬರ್ 18 ಕೊನೆಯ ದಿನವಾಗಿರಲಿದೆ.



