ಡಿವಿಜಿ ಸುದ್ದಿ, ದಾವಣಗೆರ: ಜಿಲ್ಲೆ ಯುವ ಕಾಂಗ್ರೆಸ್ ಸಮಿತಿಯಿಂದ ನಾಳೆ (ನ. 04) ಕಾರ್ಯಕರ್ತರ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳ ಸಭೆಯಯನ್ನು ಆಯೋಜಿಸಿದೆ.
ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಉಸ್ತುವಾರಿ ಕುಮಾರಿ ಸುರಭಿ ದ್ರೀವೇದಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾಳೆ (ನ.04) ಮಧ್ಯಾಹ್ನ 3.00.ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಲಯದ ಶಾಮನೂರು ಶಿವಶಂಕರಪ್ಪ ಭವನದಲ್ಲಿ ನಡೆಯಲಿದೆ.
ಈ ಸಭೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಜಿಲ್ಲೆ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಖಾಲಿದ್ ಅಹ್ಮದ್ ಸಭೆಯಲ್ಲಿ ಭಾಗಿಯಾಗುವರು. ಭಾರತೀಯ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ, ಇತ್ತೀಚಿನ ಕಾಂಗ್ರೆಸ್ ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಗುವುದು. ಜಿಲ್ಲಾ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ತಾಲ್ಲೂಕು ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಸಭೆಗೆ ಆಗಮಿಸಬೇಕೆಂದು ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸಾಗರ್ ಎಲ್.ಎಚ್. ಕೋರಿದ್ದಾರೆ.