ಡಿವಿಜಿ ಸುದ್ದಿ, ದಾವಣಗೆರೆ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ, ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ್ ಕಾಡಜ್ಜಿ, ಹಿರಿಯ ಪತ್ರಕರ್ತ ಕೆ.ಏಕಾಂತಪ್ಪ, ತಾರಾನಾಥ್, ಬಸವರಾಜ್ ದೊಡ್ಡಮನಿ, ನಾಗರಾಜ್ ಬಡದಾಳ್, ಕಿರಣ್, ಯೋಗಿಶ್, ವಿನಾಯಕ್ ಪೂಜಾರ್, ರಾಮು, ಫಕೃದ್ದೀನ್, ಚಂದ್ರಶೇಖರ್, ವಿಜಯ್ ಜಾಧವ್ ಹಾಗೂ ಕೂಟದ ಸದಸ್ಯರು ಉಪಸ್ಥಿತರಿದ್ದರು.