ಡಿವಿಜಿ ಸುದ್ದಿ, ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗಿನ ಮಹತ್ವದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜೊತೆಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡುವ ಮೊದಲು ಪ್ರಾಂಶುಪಾಲರ ಹುದ್ದೆಗೆ ಪದನ್ನೋತಿ ನೀಡಿ ವರ್ಗಾವಣೆ ಪ್ರಾರಂಭಿಸಲಾಗುವುದು ಎಂದರು.



