ಮಂಗಳೂರು: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲೆ ಆರೋಪ, ಸಾಕ್ಷ್ಯಾಧಾರ ಸಿಕ್ಕಿವೆ. ಹೀಗಾಗಿ ಸಿಬಿಐ ಅವರನ್ನು ವಶಕ್ಕೆ ಪಡೆದಿರಬಹುದು ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಿಧನರಾದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶಗೌಡ ಗೌಡ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆ. ಈಗಲಾದರೂ ನ್ಯಾಯ ಸಿಗಲಿ ಎಂಬುದೇ ನಮ್ಮ ಅಭಿಪ್ರಾಯ. ವಿನಯ್ ಕುಲಕರ್ಣಿ ಬಿಜೆಪಿಗೆ ಸೇರುತ್ತಾರೆ ಎಂಬುದ್ದು ಶುದ್ದ ಸುಳ್ಳು ಎಂದರು.



