ಡಿವಿಜಿ ಸುದ್ದಿ, ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ಅಧಿಕೃತವಾಗಿದ್ದು, ವೈದ್ಯಕೀಯ ತಪಾಸಣೆ ನಂತರ ಕೋರ್ಟ್ ಗೆ ಹಾಜರು ಪಡಿಸಲಾಗುತ್ತಿದೆ.
ಬೆಳಗ್ಗೆಯಿಂದ ವಿಚಾರಣೆ ನಂತರ ಇದೀಗ ವೈದ್ಯಕೀಯ ತಪಾಸಣೆಗೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗಲಾಗಿದೆ. ವೈದ್ಯಕೀಯ ತಪಾಸಣೆ ನಂತರ 3 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರು ಪಡಿಸಿದ ನಂತರ ಬಂಧನವಾಗಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ವಿನಯ್ ಕುಲಕರ್ಣಿಗೆ ಕೋವಿಡ್ ಪರೀಕ್ಷೆ ಸೇರಿದಂತೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ ವಿನಯ್ ಕುಲಕರ್ಣಿ, ಇದೊಂದು 100ಕ್ಕೆ 100ರಷ್ಟು ರಾಜಕೀಯ ಪ್ರೇರಿತ. ಇದರಲ್ಲಿ ಹೇಳುವುದಕ್ಕೆ ಏನು ಇಲ್ಲ ಎಂದಿದ್ದಾರೆ.



