ಡಿವಿಜಿ ಸುದ್ದಿ, ಧಾರವಾಡ: ನಾನು ಬಿದ್ದು, ಎದ್ದು, ಗೆದ್ದು ಬರುವೆನು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬರೆದುಕೊಂಡಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಆರೋಪ ಸಂಬಂಧ ಸಿಬಿಐ ವಶದಲ್ಲಿರುವ ಕುಲಕರ್ಣಿ ಫೇಸ್ ಬುಕ್ ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ಬಿದ್ದು, ಎದ್ದು, ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೆ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದು ಸುಳ್ಳಾಗುವುದಿಲ್ಲ ಇಂತಿ ನಿಮ್ಮ ವಿನಯ್ ಕುಲಕರ್ಣಿ ಎಂದು ಪೋಸ್ಟ್ ಮಾಡಿದ್ದಾರೆ.