ಡಿವಿಜಿ ಸುದ್ದಿ, ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಇಂದು, ನಾಳೆ (ನ.08) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಇನ್ನೆರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗಲಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನ. 9 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



