ಬೃಹತ್ ಶೋಭಾಯಾತ್ರೆ ಮೂಲಕ ಸಂಭ್ರಮದ ವಿಜಯದಶಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿಸುದ್ದಿ.ಕಾಂ,ದಾವಣಗೆರೆ: ನಾಡಹಬ್ಬ ವಿಜಯದಶಮಿಯ ಅಂಗವಾಗಿ ವಿಶ್ವ ಹಿಂದು ಪರಿಷತ್, ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿ ಹಾಗೂ ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಶೋಭಾಯಾತ್ರೆ ಮೂಲಕ ಸಂಭ್ರಮದಿಂದ ವಿಜಯದಶಮಿ ಆಚರಿಸಲಾಯಿತು.

ಬೇತೂರು ರಸ್ತೆಯ ವೆಂಕಟೇಶ ವೃತ್ತದಲ್ಲಿ ಜಡೇ ಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಯಾತ್ರೆಯು ಬಂಬೂ ಬಜಾರ್ ರಸ್ತೆ, ಶಾಂತಿ ಚಿತ್ರಮಂದಿರ ರಸ್ತೆ, ಎಕ್ಸ್ ಮುನ್ಸಿಪಲ್ ಕಾಲೇಜು, ಕೆ.ಆರ್.ಮಾರುಕಟ್ಟೆ, ಬೆಳ್ಳೂಡಿಗಲ್ಲಿ ಮೂಲಕ ಕಾಳಿಕಾ ದೇವಿ ರಸ್ತೆಯಲ್ಲಿ ಮೂಲಕ ವೃತ್ತ, ಬಾರ್‌ಲೈನ್ ರಸ್ತೆ, ಮೂಲಕ ಸಾಗಿ ಸಂಜೆ ವೇಳೆಗೆ ಅಂತಿಮವಾಗಿ ಪಿಬಿ ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನಕ್ಕೆ ತಲುಪಿತು.

vijayadashami1

ಮೆರವಣಿಗೆಯಲ್ಲಿ ವೀರ ಸಾವರ್ಕರ್, ಕೆಂಪೇಗೌಡ, ರಾಮಮಂದಿರ, ಅಮರ್ ಜವಾನ್, ಭಾರತಾಂಬೆ, ಗೋರಕ್ಷಣೆ, ಭಾರತೀಯ ಸೈನಿಕರು ಸೆಣಸಾಟ , ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ, ಕನಕದಾಸ, ಭಗತ್ ಸಿಂಗ್, ಸುಭಾಷ್ ಚಂದ್ರಬೋಸ್, ಕಿತ್ತೂರು ರಾಣಿ ಚನ್ನಮ್ಮ, ನಗರದೇವತೆ ದುರ್ಗಾಂಬಿಕ ದೇವಿ ಸೇರಿದಂತೆ ಅಧಿಕ ಭಾವಚಿತ್ರಗಳು ಗಮನ ಸೆಳೆದವು.

ಡೊಳ್ಳು, ಸಮಾಳ, ನಂದಿಕೋಲು, ವೀರಗಾಸೆ, ಗೊರವರ ಕುಣಿತ, ಇತರೆ ಕಲಾತಂಡಗಳು ನೋಡುಗರ ಗಮನ ಸೆಳೆದವು. ಡಿಜೆಯಿಂದ ಹೊರಹೊಮ್ಮುತ್ತಿದ್ದ ಅಬ್ಬರದ ಸದ್ದಿಗೆ ಯುವಕರು ಹುಚ್ಚೆದ್ದು ಕುಣಿದರು.

vijayadashami2.jpg

ಪಿಬಿ ರಸ್ತೆಯ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸಂಜೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಂಬು ಛೇದನ ಮೂಲಕ ಬನ್ನಿ ಮುಡಿದರು. ಬನ್ನಿ ಬಂಗಾರವಾಗಲಿ ಎಂದು ದಾವಣಗೆರೆ ಸಮಸ್ತ ಜನತೆಗೆ ವಿಜಯ ದಶಮಿ ಹಬ್ಬದ ಶುಭಾಶಯ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಆವರಗೊಳ್ಳದ ಶ್ರೀ ಓಂಕಾರ ಸ್ವಾಮೀಜಿ , ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶಿವಕುಮಾರ್ ದೇವರಮನೆ ಸೇರಿದಂತೆ ಮತ್ತಿದರರು ಉಪಸ್ಥಿತರಿದ್ದರು.

vijayadasham 5

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್, ಶೋಭಾಯಾತ್ರೆ ಸಾಗುವ ದಾರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಮೆರವಣಿಗೆಯ ದೃಶ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಲು ಡ್ರೋನ್ ಕ್ಯಾಮೆರಾ ಬಳಸಲಾಗಿತ್ತು.

ಶೋಭಾಯಾತ್ರೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಹಿಂದೂ ಪರ ಸಂಘಟನೆಯ ಮುಖಂಡ ಕೆ.ಬಿ.ಶಂಕರನಾರಾಯಣ, ಬಿಜೆಪಿ ಮುಖಂಡ ವೈ.ಮಲ್ಲೇಶ್, ಸಂಕೋಳ್ ಚಂದ್ರಶೇಖರ್, ಎಚ್.ಡಿ.ವೀರೇಶ್, ಕುಸುಮ ಶೆಟ್ರು, ರಾಜನಹಳ್ಳಿ ಶಿವಕುಮಾರ್, ಅಜಯ್, ರಾಜಶೇಖರ್ ಇತರರು ಭಾಗವಹಿಸಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *