ಡಿವಿಜಿ ಸುದ್ದಿ, ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.ಆರ್ ಆರ್ ನಗದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಶಿರಾದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅಲ್ಪ ಮುನ್ನಡೆ ಸಾಧಿಸಿದ್ದಾರೆ.
ಶಿರಾ ಕ್ಷೇತ್ರದ ಮತ ಎಣಿಕೆ ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯುತ್ತಿದ್ದರೆ, ಆರ್. ಆರ್. ನಗರದ ಮತ ಎಣಿಕೆ ಕಾರ್ಯ ಜ್ಞಾನಾಕ್ಷಿ ವಿದ್ಯಾ ನಿಕೇತನ ಶಾಲೆಯಲ್ಲಿ ನಡೆಯುತ್ತಿದೆ.
ಸದ್ಯದ ಮಾಹಿತಿ ಪ್ರಕಾರ ಆರ್.ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 44,802 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು, 22,125 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ 1,711 ಮತಗಳನ್ನು ಪಡೆದಿದ್ದಾರೆ.ಇನ್ನು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು 14,206 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು 12,718 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ ಅವರು 8,879 ಮತಗಳನ್ನು ಪಡೆದಿದ್ದಾರೆ.