ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 56 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,960ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ರ 41 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು 2209 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 56 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 12,960ಕ್ಕೆ ಏರಿಕೆಯಾಗಿದೆ. ಒಟ್ಟು 63 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,404 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 492 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,03,418 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,30,214 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,16,349 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 413 ಜನರ ವರದಿ ಬರುವುದು ಬಾಕಿ ಇದೆ. 492 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.