ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರ ವರದಿಯಲ್ಲಿ 41 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,001ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 44 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 2452 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 41 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 13,001ಕ್ಕೆ ಏರಿಕೆಯಾಗಿದೆ. ಒಟ್ಟು 63 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,448 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 489 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,03,926 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 1,32,666 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,18,634 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 536 ಜನರ ವರದಿ ಬರುವುದು ಬಾಕಿ ಇದೆ. 495 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತ ಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಚಿತ್ರದುರ್ಗ: 41 ಜನರಿಗೆ ಕೋವಿಡ್, ಸೋಂಕಿತರ ಸಂಖ್ಯೆ 13,001ಕ್ಕೆ ಏರಿಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment