ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ಟೀಟ್ ಮಾಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವ ಡಾ.ಸುಧಾಕರ್, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತಿತರರು ಸಂತಾಪ ಸೂಚಿಸಿದ್ದಾರೆ.