ದಾವಣಗೆರೆ: ಜಿಲ್ಲೆಯಲ್ಲಿ ಇಂದು 28 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 21217ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 39 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು 20633 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 262 ಮಂದಿ ಕೊರೊನದಿಂದ ಸಾವನ್ನಪ್ಪಿದ್ದಾರೆ. ಸದ್ಯ 322 ಕೊರೊನಾ ಪಾಸಿಟಿವ್ ಪ್ರಕರಣಗಳಿವೆ. ಇಂದು ಪತ್ತೆಯಾದ ಕೇಸ್ ಗಳಲ್ಲಿ ದಾವಣಗೆರೆ 20, ಹರಿಹರ 03, ಜಗಲೂರು 03, ಚನ್ನಗಿರಿ 02, ಹೊನ್ನಾಳಿ 00 ಪ್ರಕರಣಗಳು ದಾಖಲಾಗಿವೆ.



