ಬೆಳಗಾವಿ: ನಮ್ಮಣ್ಣ ಉಮೇಶ ಕತ್ತಿ ಅವರಿಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಲು 17 ಮಂದಿ ಹೊರಗಿನಿಂದ ಬಂದಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ಕೊಡಬೇಕಿರುವುದರಿಂದ ನಮ್ಮಣ್ಣ ತ್ಯಾಗ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಅಣ್ಣನಿಗೆ ಸ್ಥಾನಮಾನ ಕೊಡುತ್ತಾರೆ. ಪಕ್ಷವು ನಮಗೆ ಇಷ್ಟೆಲ್ಲ ಕೊಟ್ಟಾಗ ನಾವೂ ಸ್ವಲ್ಪ ತ್ಯಾಗ ಮಾಡಬೇಕಾಗುತ್ತದೆ ಎಂದರು.