ದಾವಣಗೆರೆ: ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಸಿಸಲು ಆದೇಶಿಸಿದ ಸರ್ಕಾರದ ಕ್ರಮವನ್ನು ನಾವು ಸ್ವಾಗತಿಸುತ್ತೇವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಾಜ ಜನಸಂಖ್ಯೆ ಜಾಸ್ತಿಯಿದೆ. ಅದಕ್ಕೆ ತಕ್ಕನಾದ ಅನುದಾನವನ್ನು ಸರ್ಕಾರ ನೀಡಬೇಕು. ಆದರೆ, ಈಗ ಪ್ರಾಧಿಕಾರ ರಚಿಸಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.
ಅದೇ ರೀತಿ ಶೇ 16 ರಷ್ಟು ಮೀಸಲಾತಿ ಲಿಂಗಾಯತರಿಗೆ ನೀಡಬೇಕು. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲಿ ಎಂದು ಆಗ್ರಹಿಸಿದರು.