ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಬಗ್ಗೆ ಚರ್ಚಿಸಲು ನಾಳೆ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಕರ್ನಾಟಕ ದಾವಣಗೆರೆ ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕೆಂಬ ಕೂಗು ಜೋರಾಗಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಕಾಲಗರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳುವ ಮೂಲಕ ಮತ್ತೊಷ್ಟು ಕುತೂಹಲ ಹೆಚ್ಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತವರಿಗೆ ಸಚಿವ ಸ್ಥಾನ ನೀಡುವುದಕ್ಕೆ ನನ್ನ ವಿರೋಧವಿದೆ. ಪ್ರಜಾಪ್ರಭುತ್ವದಲ್ಲಿ ಜನರಿಂದ ನೇರವಾಗಿ ಆಯ್ಕೆ ಆದವರಿಗೆ ಮೊದಲ ಆದ್ಯತೆ ನೀಡಬೇಕು. ಆದರೆ, ಸೋತವರಿಗೆ ನೀಡುವುದನ್ನು ವಿರೋಧಿಸುತ್ತೇವೆ. ಈ ಹೇಳಿಕೆಗೆ ಈಗಾಲೂ ನಾನು ಬದ್ಧವಾಗಿದ್ದೇನೆ. ಬಗ್ಗೆ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಈ ವಿಷಯ ಪ್ರಸ್ತಾಪ ಮಾಡುತ್ತೇನೆ ಎಂದರು.
ಮಧ್ಯಕರ್ನಾಟಕದ ದಾವಣಗೆರೆ ಶೈಕ್ಷಣಿಕ, ವ್ಯಾಪಾರ, ಕೈಗಾರಿಕೆ ವಲಯದಲ್ಲಿ ಬೆಳವಣಿಗೆ ಹೊಂದುತ್ತಿದೆ. ಪ್ರಾದೇಶಿಕ ಅಸಮತೋಲ ನಿವಾರಿಸಲು ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕಿದೆ. ಹೀಗಾಗಿ ಜಿಲ್ಲೆಯಲ್ಲಿ ಎಲ್ಲಾ ಶಾಸಕರು ಸೇರಿ ತೀರ್ಮಾನ ಮಾಡುತ್ತೇವೆ. ಜಿಲ್ಲೆಯಲ್ಲಿ ಇಂಥವರಿಗೆ ನೀಡಿ ಎಂದು ಯಾರು ಕೂಡ ಸಹಿ ಮಾಡಿಲ್ಲ. ಒಂದೇ ಹೆಸರನ್ನು ಸೂಚಿಸಿಲ್ಲ. ಹೀಗಾಗಿ ಕಾಲಗರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ತಿಳಿಸಿದರು.



