ದಾವಣಗೆರೆ: ವೀರಶೈವ ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ನಿರ್ಧಾರವನ್ನು ವೀರಶೈವ ಮಹಾಸಭಾ ಜಿಲ್ಲಾ ಘಟಕ ಹಾಗೂ ರಾಜ್ಯ ಯುವ ಘಟಕದಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ಕಾಯಿಪೇಟೆಯ ಬಸವೇಶ್ವರ ದೇವಸ್ಥಾನದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿಗಮ ರಚಿಸಿದ್ದಾರೆ. ವೀರಶೈವ ಮಹಾಸಭಾ ದಾವಣಗೆರೆ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಹಾಗೂ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶ್ರೀನಿವಾಸ್ ಶಿವಗಂಗಾ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ದೇವರಮನೆ ಶಿವಕುಮಾರ್ , ಮುಖ್ಯಮಂತ್ರಿಗಳಿಗೆ ಅಭಿನಂದಿಸಿ ಈ ಕೂಡಲೇ ನಿಗಮಕ್ಕೆ 1000 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಗೊಳಿಸಬೇಕು, ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಎಲ್ಲಾ ಒಳ ಪಂಗಡಗಳಿಗೂ ಶೇ 16% ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು.
ನಗರ ಯುವ ಘಟಕ ಅಧ್ಯಕ್ಷರಾದ ಶಂಭು ಊರೇಕೊಂಡಿ ನೇತೃತ್ವದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಸೋಗಿ ಶಾಂತಕುಮಾರ್, ಶಿವನಗೌಡ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಆರ್ ಟಿ ಪ್ರಶಾಂತ್, ನಗರ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನೀಲಗುಂದ, ಅವಿನಾಶ್ ಬಂಡೋಲ್, ಉಪಾಧ್ಯಕ್ಷರುಗಳಾದ ರಾಜು ನೀಲಗುಂದ್, ಗುರು ಸೋಗಿ, ಅಭಿಷೇಕ್ ಎಳೆಹೊಳೆ, ಕಾರ್ಯದರ್ಶಿಗಳಾದ ಅಖಿಲೇಶ್ ಕೊಗುಂಡಿ, ಟಿಂಕರ್ ಮಂಜಣ್ಣ,ರಾಜು ನೀಲಗುಂದ ಅವಿನಾಶ್ ಬಂದೋಳ್ ನಾಗರಾಜ್ ಬೇಳವನೂರು, ಗಂಗಾಧರ, ಜಯದೇವ,ಮಹಿಳಾ ಘಟಕದ ನಗರ ಅಧ್ಯಕ್ಷೆ ವಾಲಿ, ಶೋಭಾ ಕೊಟ್ರೇಶ್, ಮಂಗಳ, ಮಂಜುಳಾ ಇಟಗಿ, ಗುರು ಸೋಗಿ, ಯೊಗೇಶ್ ದೇವರಮನಿ ಉಪಸ್ಥಿತರಿದ್ದರು.




