ನವದೆಹಲಿ : ದೆಹಲಿಯಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಒಂದೇ ದಿನದಲ್ಲಿ 7,500 ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5.30 ಲಕ್ಷಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ ಕೊರೊನಾ ಮಹಾಮಾರಿಗೆ 131 ಜನರು ಬಲಿಯಾಗಿದ್ದು, ಈ ವರೆಗೆ 8 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾಗೆ ಸಾವನ್ನಪ್ಪಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಅರೆಸೇನಾಪಡೆಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿದೆ.ಇನ್ನು ದೆಹಲಿಯಲ್ಲಿ ಕೊರೊನಾ ವೈರಸ್ ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸರ್ವಪಕ್ಷ ತುರ್ತು ಸಭೆ ಕರೆದಿದ್ದಾರೆ.



