ದಾವಣಗೆರೆ: ಮೌನೇಶ್ವರ, ಜಯನಗರ ಮತ್ತು ಇ.ಎಸ್.ಐ ಫೀಡರ್‍ಗಳಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನ.20 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮೌನೇಶ್ವರ ಫೀಡರ್ ವ್ಯಾಪ್ತಿಯ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಜಯನಗರ ಫೀಡರ್‍ನ ವ್ಯಾಪ್ತಿಯ ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಸುತ್ತ ಮುತ್ತಲಿನ ಪ್ರದೇಶಗಳು ಹಾಗೂ ಇ.ಎಸ್.ಐ ಫೀಡರ್‍ನ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



