ಬೆಳಗಾವಿ: ಕೊರೊನಾ ಲಸಿಕೆ ಬಗ್ಗೆ ಮೂರನೇ ಹಂತದ ಪರೀಕ್ಷೆ ನಡೆಸುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಕಂಪನಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಘೋಷಿಸುವ ಲಸಿಕೆಯನ್ನೇ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಇನ್ನೂ ಅಧಿಕೃತವಾಗಿ ಬಿಡುಗಡೆ ಆಗಿಲ್ಲ. ಲಸಿಕೆ ಸಿದ್ದಪಡಿಸುವ ಕಂಪನಿ ಜತೆಗೆ ಕೇಂದ್ರ ಸರ್ಕಾರ ಸಂಪರ್ಕ ಸಾಧಿಸಿದೆ. ಶೀಘ್ರದಲ್ಲೇ ದೊಡ್ಡ ಪ್ರಮಾಣದಲ್ಲಿ ಲಸಿಕೆ ದೇಶಕ್ಕೆ ಲಭ್ಯವಾಗಲಿದೆ.ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಇಂದು ಸಭೆ ನಡೆಸಲಾಗುವುದು. ನಂತರ ಹುಬ್ಬಳ್ಳಿ, ಧಾರವಾಡದಲ್ಲಿ ಸಭೆ ನಡೆಸಲಾಗುವುದು. ಆರೋಗ್ಯ ಇಲಾಖೆಯ ಸುಧಾರಣೆಗಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಸಂಗ್ರಹಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಕೇಂದ್ರ ಆರೋಗ್ಯ ಸಚಿವರ ಜತೆಗೆ ಈಗಾಗಲೇ ವಿಡಿಯೋ ಕಾನ್ಪರೆನ್ಸ್ ನಡೆಸಿದ್ದು, ಕೋವಿಡ್ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ . ಭಾರತ ದೇಶದಲ್ಲಿ ದೊಡ್ಡ ಮಟ್ಟಿಗೆ ಲಸಿಕೆ ಸಿಗುವ ಕೆಲಸ ಆಗುತ್ತದೆ, ಆರೋಗ್ಯ ಇಲಾಖೆಯಲ್ಲಿ ಜನಪರ ಬದಲಾವಣೆಗಳು ನಡೆಯುತ್ತಿವೆ. ಅಂತಾರಾಷ್ಟ್ರೀಯ ಗುಣಮಟ್ಟದ 108 ಆಯಂಬುಲೆನ್ಸ್ ಸರ್ವೀಸ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.