ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾದ ಮಾತ್ರಕ್ಕೆ ಸಂಪತ್ ರಾಜ್ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಸೇರಿ ಅನೇಕ ಅಪರಾಧಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವ್ರ ಮನೆಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭೇಟಿ ನೀಡಿ, ಪಕ್ಷದದಿಂದ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಅಖಂಡ ಅವರು ನಮ್ಮನ್ನು ಭೇಟಿ ಮಾಡಿದ್ದಾರೆ. ನೋವನ್ನ ಹೇಳಿಕೊಂಡಿದ್ದಾರೆ. ಈ ಬಗ್ಗೆ ನಾವು ಚರ್ಚಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಆರೋಪಿಯಾದ ಮಾತ್ರಕ್ಕೆ ಸಂಪತ್ ರಾಜ್ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ನೀಡಿದರು.
ಶಿವಕುಮಾರ್ ನನ್ನ ಬೆನ್ನಿಗೆ ನಿಲ್ಲುತ್ತಾರೆಂದು ಭರವಸೆ ಮೂಡಿದೆ. ಪಕ್ಷ ಕೂಡಾ ಜೊತೆಗೆ ನಿಲ್ಲಲಿದೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.