Connect with us

Dvgsuddi Kannada | online news portal | Kannada news online

ಐಎಂಎ ಬಹು ಕೋಟಿ ವಂಚನೆ ಪ್ರಕರಣ ; ಮಾಜಿ ಸಚಿವ ರೋಷನ್ ಬೇಗ್ ವಶಕ್ಕೆ ಪಡೆದ ಸಿಬಿಐ

ಪ್ರಮುಖ ಸುದ್ದಿ

ಐಎಂಎ ಬಹು ಕೋಟಿ ವಂಚನೆ ಪ್ರಕರಣ ; ಮಾಜಿ ಸಚಿವ ರೋಷನ್ ಬೇಗ್ ವಶಕ್ಕೆ ಪಡೆದ ಸಿಬಿಐ

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಸಂಜಯ್‌ ನಗರದ ಸಿಬಿಐ ಕಚೇರಿಯಲ್ಲಿ ರೋಷನ್‌ ಬೇಗ್‌ ಅವರನ್ನು ಬೆಳಗ್ಗೆಯಿಂದ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್‌ ಬೇಗ್‌ ಹೆಸರು ಮೊದಲಿನಿಂದಲೂ  ಕೇಳಿ ಬಂದಿತ್ತು. ಪ್ರಕರಣದ ಪ್ರಮುಖ  ಆರೋಪಿ ಮನ್ಸೂರ್ ಖಾನ್ ರೋಷನ್ ಬೇಗ್ ಹೆಸರು ಬಾಯಿ ಬಿಟ್ಟಿದ್ದ.  ಈ ಪ್ರಕರಣದಲ್ಲಿ  ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ರೋಷನ್‌ ಬೇಗ್‌ ಪಡೆದಿದ್ದಾರೆ. ಐಷಾರಾಮಿ ಕಾರು ಸೇರಿದಂತೆ ಬಹುತೇಕ ಬೆಲೆ ಬಾಳುವ ವಸ್ತುಗಳನ್ನು ಮನ್ಸೂರ್ ಖಾನ್ ಉಡುಗೊರೆ ನೀಡಿದ್ದ ಎಂಬ ಆರೋಪ ಕೇಳಿ ಬಂದಿತ್ತು.

ಶಿವಾಜಿನಗರದ ಕಾಂಗ್ರೆಸ್‌ ಶಾಸಕರಾಗಿದ್ದ ರೋಷನ್‌ ಬೇಗ್‌ ದಿಢೀರ್‌ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೆ ಯತ್ನಿಸಿದ್ದರು. ಸಿಬಿಐ ತನಿಖೆಯಿಂದ ಪಾರಾಗಲು ರೋಷನ್‌ ಬೇಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದರು.

ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ ಕಳೆದ ಏಪ್ರಿಲ್, ಮೇ ತಿಂಗಳಿನಲ್ಲಿ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ 2019ರ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top