ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ ರಚಿಸಿರುವ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶ್ರೀ.ಬಿ.ಎಸ್.ಪರಮಶಿವಯ್ಯ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ನಿನ್ನೆಯಷ್ಟೇ (ನ.24) ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅಧಿಕೃತ ಆದೇಶ ಹೊರಡಿಸಿತ್ತು. ನಿಗಮಕ್ಕೆ 500 ಕೋಟಿ ಅನುದಾನ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಇದೀಗ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.




