ಮೈಸೂರು: ನಿವಾರ್ ಚಂಡಮಾರುತದಿಂದ ರಾಜ್ಯದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮ ಕೈಗೊಂಡು ಅಲರ್ಟ್ ಆಗಿರಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 25 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡುತ್ತೇವೆ. ಇಂದು ಸಂಜೆಯ ವೇಳೆಗೆ ಆದೇಶ ಹೊರಡಿಸಲಾಗುತ್ತದೆ. ಯಾರಿಗೆ ಅವಕಾಶ ತಪ್ಪಿದೆಯೋ ಅವರಿಗೆ ಮುಂದೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ ಸಂಪುಟ ವಿಸ್ತರಣೆ ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ ಎಂದರು.



