ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಮನೆಬಾಗಿಲಿಗೆ ಮಹಾನಗರ ಪಾಲಿಕೆ ಕಾರ್ಯಕ್ರಮದಲ್ಲಿ ಗಾಂಧಿನಗರದ ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ಮರು ನಿರ್ಮಾಣ ಕಾರ್ಯ ಹಮ್ಮಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ್, ಮೇಯರ್ ಅಜಯ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಇಲಾಖೆಯ ವತಿಯಿಂದ ಹಾಗೂ ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಎಲ್.ಎಮ್.ಹನುಮಂತಪ್ಪ, ಬಿ.ಹೆಚ್.ವೀರಭದ್ರಪ್ಪ. ಸಾಗರ್ ಎಲ್ ಎಚ್. ಬಿ ಎಂ ರಾಮಸ್ವಾಮಿ ಮನವಿ ಸಲ್ಲಿಸಿದರು.




