ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದು ಕೊಂಡಿತ್ತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.
- ಆರು ತಾಲ್ಲೂಕು ಕೇಂದ್ರಗಳನ್ನು ಒಳಗೊಂಡ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸಚಿವ ಸಂಪುಟದಲ್ಲಿ ಇಂದು ಒಪ್ಪಿಗೆ
- ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲ್ಲೂಕುಗಳನ್ನು ಒಳಗೊಂಡ ನೂತನ ವಿಜಯನಗರ ಜಿಲ್ಲೆ ಘೋಷಣೆ
- ಜಿಲ್ಲಾಧಿಕಾರಿ ಕಚೇರಿ, ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಕಂದಾಯ ವಿಭಾಗಗಳು, ಉಪ ವಿಭಾಗ ತೆರೆಯಲು ಸಂಪುಟ ಅನುಮೋದನೆ ಜಿಲ್ಲೆ ರಚನೆಗೆ ಅಗತ್ಯ ಅನುದಾನ ಜತೆಗೆ ಕಾನೂನಾತ್ಮಕ ಅನುಮೋದನೆ
- ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಕಳುಹಿಸುವ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದಕ್ಕೆ ಸರಿದ ಸರ್ಕಾರ
- ಬಿಬಿಎಂಪಿಗೆ ಬೆಂಗಳೂರು ಉತ್ತರ ತಾಲೂಕು ಯಶವಂತಪುರ ಹೋಬಳಿಯ ಸೋಮಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಲಕ್ಷ್ಮೀಪುರ ಕಂದಾಯ ಗ್ರಾಮ,ಕಾನ್ಷರಾಂ ನಗರ, ಲಕ್ಷ್ಮೀಪುರದ ಎಲ್ಲ ಬಡಾವಣೆಗಳನ್ನು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡ್ ನಂ 12ಕ್ಕೆ ಸೇರ್ಪಡೆಗೆ ಒಪ್ಪಿಗೆ
- 98 ವಸತಿ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. ವಸತಿ ಯೋಜನೆಗೆ 2,275 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ 1:15 ಅನುಪಾತ ನಿಗದಿ ಪಡಿಸಿ ನಿಯಮ ತಿದ್ದುಪಡಿಗೆ ಅನುಮತಿ



