ಕಾರವಾರ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್ .ಆರ್ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಆ ಒಂದು ವಿಡಿಯೋ ಕಾರಣ ಎಂಬ ಸ್ಪೋಟಕ ಸುದ್ದಿಯೊಂದನ್ನು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂತೋಷ್ ಯಾರದ್ದೋ ವೈಯಕ್ತಿಕ ವಿಡಿಯೊವನ್ನು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಸಚಿವರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೆ ಬಂದಿತ್ತು. ಅದನ್ನು ಮುಂದೆ ಇಟ್ಟುಕೊಂಡು ವಿಧಾನಪರಿಷತ್ ಸದಸ್ಯರು, ಸಚಿವರು ಇಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್ಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ಕೇಳಿದ್ದೇನೆ ಎಂದು ಹೇಳಿದರು.

ಈ ವಿಚಾರದಲ್ಲಿ ಗುಪ್ತವಾದ ಸಂಗತಿ ಅಡಗಿದೆ. ಸರ್ಕಾರವೇ ತನಿಖೆ ಮಾಡುವುದರಲ್ಲಿ ಅರ್ಥವಿಲ್ಲ. ಬೇರೆ ತನಿಖೆ ಆಗಬೇಕು. ಸತ್ಯಾಂಶ ಏನಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು ಸರ್ಕಾರವನ್ನು ಒತ್ತಾಯ ಮಾಡಿದರು. ಇನ್ನೂ ಎನ್.ಆರ್.ಸಂತೋಷ್ ಆರೋಗ್ಯ ಸುಧಾರಣೆಯಾಗಿದ್ದು, ಮಧ್ಯಾಹ್ನ ವಾರ್ಡ್ಗೆ ಶಿಫ್ಟ್ ಮಾಡಲಾಗುವುದು ಎಂದು ಎಂ.ಎಸ್.ರಾಮಯ್ಯ ಆಸ್ಪತ್ರೆ ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.



