ದಾವಣಗೆರೆ: ಜಿಲ್ಲೆಯಲ್ಲಿ ಇಂದು 28 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 21582ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ 15 ಜನ ಗುಣಮುಖರಾಗಿದ್ದಾರೆ. ಇದುವರೆಗೆ 21065 ಗುಣಮುಖರಾಗಿದ್ದಾರೆ. ಕೊರೊನಾದಿಂದ ಇದುವರೆಗೆ 263 ಮಂದಿ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 254 ಪ್ರಕರಣಗಳಿವೆ. ದಾವಣಗೆರೆ 12, ಹರಿಹರ 07, ಜಗಳೂರು 02, ಚನ್ನಗಿರಿ 04, ಹೊನ್ನಾಳಿ 02 ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.



