ಗದಗ : ಉದ್ಯೋಗಾಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಸಾವಿರ ಸಿಬ್ಬಂದಿ ನೇಮಕಾತಿಗೆ ರ ಸರ್ಕಾರ ಶೀಘ್ರದಲ್ಲೇ ಅರ್ಜಿ ಕರೆಯಲಿದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, 16 ಸಾವಿರ ಸಿಬ್ಬಂದಿಯ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಅರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದ್ದು, ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



