ಬೆಂಗಳೂರು : ಭೂಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟರ್ ಮಾಡಿದ ಅವರು, ಕಾಂಗ್ರೆಸ್ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್ ರೈತ ಸಂಘಗಳನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದರು.
ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ ಆರೋಪಿಸಿದರು.



