ದಾವಣಗೆರೆ: ಜ.1 ರಿಂದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 10ನೇ ತರಗತಿ ಪ್ರಾರಂಭ ಮತ್ತು 6 ರಿಂದ 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಶಾಲೆಯ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ಸೂಚನೆ ನೀಡಲಾಗಿರುತ್ತದೆ.
ಹಾಗೂ ಇದಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿರುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳನ್ನು/ವಿದ್ಯಾಗಮ ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚಾರಣ ವಿಧಾನಗಳನ್ನು ಸಿದ್ದಪಡಿಸಿದ್ದು, ಅದರಂತೆ ಕ್ರಮ ವಹಿಸುವಂತೆ ಶಾಲೆಯ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ಸೂಚಿಸಲಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



