Connect with us

Dvgsuddi Kannada | online news portal | Kannada news online

ಬೆಂಗಳೂರು : ಸಾರ್ವಜನಿಕ ಸ್ಥಳ, ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

ಪ್ರಮುಖ ಸುದ್ದಿ

ಬೆಂಗಳೂರು : ಸಾರ್ವಜನಿಕ ಸ್ಥಳ, ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

ಬೆಂಗಳೂರು : ಕೊರೊನಾ ಹೊಸ ರೂಪಾಂತರ ಹಿನ್ನೆಲೆ ಬೆಂಗಳೂರಿಗೆ ಸಾರ್ವಜನಿಕ ಸ್ಥಳ, ರಸ್ತೆಯಲ್ಲಿ ಹೊಸ ವರ್ಷಾಚರಣಗೆ ಬ್ರೇಕ್ ಹಾಕಲಾಗಿದೆ.

ಬ್ರೆಟನ್ ನಿಂದ 1638 ಜನರಲ್ಲಿ14 ಜನರಿಗೆ ಕೊರೋನಾ ಪಾಸಿಟಿವ್ ಬಂಧಿರುವುದು ದೃಢಪಟ್ಟಿದೆ. ಆದರೆ, ಅದು ಹೊಸ ಪ್ರಭೇದವೇ ಎನ್ನುವ ಬಗ್ಗೆ ತಿಳಿಯಬೇಕಿದೆ. ಹೀಗಾಗಿ ಬೆಂಗಳೂರು ನಗರದಲ್ಲಿ ಸಾರ್ವಜನಿಕ ರಸ್ತೆ, ಸ್ಥಳಗಳಲ್ಲಿ ಇದೀಗ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿಲ್ಲ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತನಾಡಿ, ಗೃಹ ಸಚಿವರ ಸೂಚನೆಯ ಮೇರೆಗೆ ನಗರದಲ್ಲಿ ಹೊಸ ವರ್ಷಾಚರಣೆಯನ್ನು ಸಾರ್ವಜನಿಕ ಸ್ಥಳ, ರಸ್ತೆಗಳಲ್ಲಿ ಆಚರಿಸುವುದಕ್ಕೆ  ನಿಷೇಧ ಹೇರಲಾಗಿದೆ. ಡಿಸೆಂಬರ್ 30, 31ಕ್ಕೆ ಅನ್ವಯವಾಗುವಂತೆ ಮಾರ್ಗಸೂಚಿಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ . ನಗರದ ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಹೊಸ ವರ್ಷಾಚರಣೆ ಮಾಡೋದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top