Connect with us

Dvgsuddi Kannada | online news portal | Kannada news online

ಹೊಸ ವರ್ಷಾಚರಣೆಗೆ ಮಾರ್ಗ ಸೂಚಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಪ್ರಮುಖ ಸುದ್ದಿ

ಹೊಸ ವರ್ಷಾಚರಣೆಗೆ ಮಾರ್ಗ ಸೂಚಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುವ ಸಾಧ್ಯತೆ ಹಿನ್ನೆಲೆ ಹೊಸ ವರ್ಷಾಚರಣೆಗೆ ಸೋಮವಾರದೊಳಗೆ  ನೂತನ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಿಂದ ಕೊರೊನಾ ನಮ್ಮೆಲ್ಲರನ್ನೂ ಕಾಡಿತ್ತು.ಈಗ ಒಂದು ಹಂತಕ್ಕೆ ಬರುತ್ತಿರುವ ಸಂದರ್ಭದಲ್ಲೇ ಹೊಸ ಮಾದರಿಯ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ತಂದಿದೆ ಎಂದು ಹೇಳಿದರು.

ಸೋಂಕು ಹಬ್ಬುವುದನ್ನು ತಡೆಗಟ್ಟುವ ಉದ್ದೇಶದಿಂದಲೇ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಕುರಿತು ಮಾರ್ಗಸೂಚಿಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿ ಆಯುಕ್ತರು ಚರ್ಚೆ ನಡೆಸಿ ಮಾರ್ಗಸೂಚಿ ಹೊರಡಿಸುತ್ತಾರೆ ಎಂದು ತಿಳಿಸಿದರು.

ಕೊರೊನಾ ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೊರ ದೇಶಗಳಿಂದ ಬರುವವರ ಮೇಲೆ ನಿಗಾ ಇಡಲಾಗಿದೆ. ಅದರಲ್ಲೂ ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ.ಯುರೋಪ್ ದೇಶಗಳಿಂದ ಬಂದವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದರು. ಈಗಾಗಲೇ ವಿದೇಶದಿಂದ ಬಂದವರನ್ನು ಪತ್ತೆ ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ವಿದೇಶದಿಂದ ಬಂದವರು ಕೂಡ ನಮಗೆ ಸಹಕಾರ ನೀಡಬೇಕೆಂದು ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top