ಬೆಂಗಳೂರು: ಕೊರೊನಾ ಆರ್ಥಿಕ ಸಂಕಷ್ಟದ ನಡುವೆಯೇ ಆಸ್ತಿ ತೆರಿಗೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಗಳು ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಯೋಜನೆ ರೂಪಿಸಿದ್ದು, ಈಗಿರುವ ಶೇ.15ರಷ್ಟು ತೆರಿಗೆಯನ್ನು 30ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ.
ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಿದರೆ ನಗರ ಸ್ಥಳೀಯ ಸಂಸ್ಥೆಗಳ ಜನರ ಮೇಲೆ ಆರ್ಥಿಕ ಹೊರೆಯಾಗುವ ಸಾಧ್ಯತೆ ಇದೆ. ಈವರೆಗೂ ಶೇ.15ರಷ್ಟು ಇರುವ ಆಸ್ತಿ ತೆರಿಗೆಯನ್ನು ಶೇ.30ಕ್ಕೆ ಹೆಚ್ಚಾಗಲಿದೆ.
ಕಳೆದ ವರ್ಷ ಜನವರಿ ವೇಳೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ನಿಧರಿಸಲಾಗಿತ್ತು. ಬಹಳಷ್ಟು ಕಡೆ ವಿರೋಧ ವ್ಯಕ್ತವಾಗಿದ್ದರಿಂದ ಹಂತ ಹಂತವಾಗಿ ಜಾರಿಗೆ ತರುವ ಪ್ರಯತ್ನ ನಡೆದಿತ್ತು. ಅಷ್ಟರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಆಸ್ತಿ ತೆರಿಗೆ ಹೆಚ್ಚಳವನ್ನು ಕೈ ಬಿಡಲಾಗಿತ್ತು. ಈಗ ಮತ್ತೆ ತೆರಿಗೆ ಹೆಚ್ಚಿಸಲು ತಯಾರಿ ನಡೆದಿದೆ ಎನ್ನಲಾಗುತ್ತಿದೆ.



