ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಕಾರ್ಯ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯ ಸುಸೂತ್ರವಾಗಿ ನಡೆಯಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಮತ್ತು ಶಾಂತಿ ಸುವ್ಯವಸ್ಥೆಯನ್ನು ಮುಂದುವರೆಸುವ ಸಲುವಾಗಿ ಡಿ.30 ಮತ್ತು 31 ರಂದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಿಆರ್‍ಪಿ ಕಾಲಂ 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಾಲಾಯಿಸಿ ಜಿಲ್ಲೆಯಾದ್ಯಂತ ಡಿ.30ರ ಬೆಳಿಗ್ಗೆ 6 ಗಂಟೆಯಿಂದ ಡಿ.31ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಸಮಯದಲ್ಲಿ ಗೆದ್ದ ಅಭ್ಯರ್ಥಿಗಳು ಮೆರವಣಿಗೆ ಮಾಡುವುದು ಸಭೆ, ಸಮಾರಂಭ ನಡೆಸುವುದು ಪಟಾಕಿ ಸಿಡಿಸುವುದು, ಹಾಗೂ ಘೋಷಣೆಯನ್ನು ಕೂಗುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.



