ಬೆಂಗಳೂರು: ಮುಂದಿನ ಎರಡೂವರೆ ವರ್ಷ ನಾನೇ ಸಿಎಂ. ಒಂದೂವರೆ ವರ್ಷ ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿದ್ದೇನೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂದಿನ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ. ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎನ್ನುವ ಮಾತುಗಳಿಗೆ ತಿರುಗೇಟು ನೀಡಿದರು.
ನಾಯಕತ್ವ ಗೊಂದಲ ಕೇವಲ ಮಾಧ್ಯಮ ಸೃಷ್ಟಿ. ಒಂದೆರಡು ಶಾಸಕರಲ್ಲಿ ಬೇಸರ ಇರಬಹುದು, ಅವರ ಬಳಿ ಮಾತನಾಡಿ ಸರಿಪಡಿಸಲಾಗುವುದು. ಅದಕ್ಕಾಗಿಯೇ ಸಭೆ ಕರೆದಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
ಇಂದು ನಿಷೇಧಾಜ್ಞೆ : ಕೊರೊನಾ ವೈರಸ್ ಹಿನ್ನೆಲೆ ಈ ಬಾರಿಯ ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಜನರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ . ಕೋವಿಡ್ ಕಾರ್ಯಸೂಚಿ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.