ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಅವರು ಏನು ಸುದ್ದಿ ತರುತ್ತಾರೆ ಎಂಬುವುದನ್ನು ನೋಡಬೇಕಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಶನಿವಾರ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು, ಅವರು ಏನು ಸುದ್ದಿ ತರುತ್ತಾರೆ ಎಂದು ಕಾದು ನೋಡಬೇಕಿದೆ. ಇನ್ನು ಹೊಸ ವರ್ಷದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೈಕಮಾಂಡ್ ಸಂಪುಟ ವಿಸ್ತರಣೆ ವಿಳಂಬ ಧೋರಣೆಗೆ ಸಾಕಷ್ಟು ಜನ ಆಕಾಂಕ್ಷಿಗಳು ಬೇಸತ್ತು ಹೋಗಿದ್ದಾರೆ. ಈ ಬಾರಿಯಾದರೂ ಹೈಕಮಾಂಡ್ ಶೀಘ್ರವೇ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.