ನವದೆಹಲಿ : ಕೋವಿಶೀಲ್ಡ್ ಲಸಿಕೆಯನ್ನು ಕೊರೊನಾ ತುರ್ತು ಚಿಕಿತ್ಸೆ ಬಳಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಔಷಧ ಕಂಪನಿ ಆಸ್ಟ್ರಾಜೆನೆಕಾ ಜಂಟಿಯಾಗಿ ಕೊವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಸೀರಮ್ ನ ಕೊವಿಶೀಲ್ಡ್ ಅನ್ನು ತುರ್ತು ಬಳಕೆಗೆ ನಿನ್ನೆ ಅನುಮೋದಿಸಲಾಯಿತು. ಇದು ಭಾರತದಲ್ಲಿ ತುರ್ತು ಬಳಕೆಗೆ ಅನುಮೋದಿತ ಮೊದಲ Covid-19 ಲಸಿಕೆಯಾಗಿದೆ. ಭಾರತ್ ಬಯೋಚ್ ನ ಕೊವಾಕ್ಸಿನ್, ಝೈಡಸ್ ಕ್ಯಾಡಿಲ್ ನ ಝೈಕೊವಿ-ಡಿ ಮತ್ತು ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಗಳು ಅನುಮೋದನೆಗಾಗಿ ಕಾಯುತ್ತಿದೆ ಎಂದು ಮಾಹಿತಿ ನೀಡಿದರು.