ಬೆಂಗಳೂರು : ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಉಪಾಧ್ಯಕ್ಷರಾಗಿ ಹರೀಶ್‍ಗೌಡ ಅವಿರೋಧವಾಗಿ ನೇಮಕವಾಗಿದ್ದಾರೆ. ಬೆಂಗಳೂರಿನ ಅಪೆಕ್ಸ್ ಬ್ಯಾಂಕ್‍ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಬೆಳ್ಳಿ ಪ್ರಕಾಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕ ಜಿ.ಟಿ.ದೇವೇಗೌಡರ ಪುತ್ರ ಹರೀಶ್‍ಗೌಡ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರ ಆಯ್ಕೆಯನ್ನು ಚುನಾವಣಾಧಿಕಾರಿಗಳು ಅವಿರೋಧ ಎಂದು ಘೋಷಿಸಿದರು.
ಇದಕ್ಕೂ ಮೊದಲುಯ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅಧ್ಯಕ್ಷ, ಬಳ್ಳಾರಿಯ ಚಂದ್ರಶೇಖರ್ ಅವರು ಉಪಾಧ್ಯಕ್ಷರಾಗಿದ್ದರು. ಈಗ ಅವರ ಸ್ಥಾನಕ್ಕೆ ಬೆಳ್ಳಿ ಪ್ರಕಾಶ್ ಹಾಗೂ ಹರೀಶ್‍ಗೌಡ ಅವರು ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷರಾದ ಬೆಳ್ಳಿ ಪ್ರಕಾಶ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಿರ್ಗಮಿತ ಅಧ್ಯಕ್ಷ ಕೆ.ಎನ್.ರಾಜಣ್ಣ ಅಭಿನಂದಿಸಿದರು.