ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ನೈ ಸುಳಿಗಾಳಿ ಹೆಚ್ಚಾಗಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದೆರಡು ದಿನದಿಂದ ಭಾರೀ ಮಳೆಯಾಗುತ್ತಿದೆ. ತಡರಾತ್ರಿ ರಾಜ್ಯರಾಜಧಾನಿ ಬೆಂಗಳೂರಿನ ಹಲವೆಡೆ ಮಳೆ ಸುರಿದಿದ್ದು,ಇಂದು ಬೆಳಗ್ಗೆ ಕೂಡ ತುಂತುರು ಮಳೆಯಾಗಿದೆ. ನಾಳೆಯೂ ಮುಂದುವರಿಯುತ್ತದೆ.
ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡುಗು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



