ದಾವಣಗೆರೆ: ರಾಜ್ಯದ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಂದಾಯ ನಿವೇಶನಗಳನ್ನು ಅಕ್ರಮ-ಸಕ್ರಮ ಯೋಜನೆ ಅಡಿಯಲ್ಲಿ ಸಕ್ರಮಗೊಳಿಸಲು ಈ ಬಾರಿಯ ಬಜೆಟ್ ನಲ್ಲಿ ಯೋಜನೆ ರೂಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಬಡವರಿಗೆ ಮನೆ ಕಲ್ಪಿಸಿಕೊಡಲು ಸರ್ಕಾರ ಯೋಜನೆ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಕುರಿತು ಈಗಾಗಲೇ ಎರಡು ಮೂರು ಸಭೆ ನಡೆಸಲಾಗಿದ್ದು, ಮುಂಬರುವ ಬಜೆಟ್ ನಲ್ಲಿ ಯೋಜನೆ ರೂಪಿಸಲು ಸಿಎಂಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.



