ದಾವಣಗೆರೆ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಮದ್ಯ ಕರ್ನಾಟಕ ದಾವಣಗೆರೆ ಗೆ ಒಂದು ಸ್ಥಾನ ನೀಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರ ನೇತ್ರತ್ವದಲ್ಲಿಯೇ ಬರುವ ವಿಧಾನ ಸಭೆ ಚುನಾವಣೆ ಎದುರಿಸುತ್ತೇವೆ.ಸೂರ್ಯ ಚಂದ್ರ ಎಷ್ಟು ಸತ್ಯವೋ ಅಷ್ಟೇ ಸತ್ಯ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದರು.
2023 ವಿಧಾನ ಸಭೆ ಚುನಾವಣೆ ಕೂಡಾ ಬಿಎಸ್ ವೈ ನೇತ್ರತ್ವದಲ್ಲಿ ಯೇ ನಡೆಯುತ್ತದೆ. ನಾಯಕತ್ವ ಬದಲಾವಣೆ ಬಗ್ಗೆ ವದಂತಿಗಳು ಮಾತ್ರ. ಇದರಲ್ಲಿ ಸತ್ಯಾಂಶವಿಲ್ಲ. ಈ ಬಗ್ಗೆ ರಾಜ್ಯ ಉಸ್ತುವಾರಿಗಳೇ ಸ್ಪಷ್ಟಪಡಿಸಿದ್ದಾರೆ, ಯತ್ನಾಳ್ ಬಗ್ಗೆ ನಾನು ಮಾತಾಡಲ್ಲ. ಈಗಾಗಲೇ ಅವರ ಹೇಳಿಕೆ ಬಗ್ಗೆ ರಾಜ್ಯಾಧ್ಯಕ್ಷರು ವರದಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ನಿರ್ಧಾರ ಪಕ್ಷ ಯತ್ನಾಳ್ ವಿರುದ್ದ ತೆಗೆದುಕೊಳ್ಳುತ್ತದೆ ಎಂದರು.



