ದಾವಣಗೆರೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಸಾರಥಿ-ಕುರುಬರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆಗಾಗಿ ಜ.5 ರಂದು ಮಂಡಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಉದ್ಯಮಶೀಲರು. ರೂ. 250-00 ಗಳ ಡಿ.ಡಿ ಯನ್ನು ಕೆಐಎಡಿಬಿ ದಾವಣಗೆರೆ ಹೆಸರಿಗೆ ತೆಗೆದು ಕೆಐಎಬಿಡಿ ವಲಯ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿತ್ತು.
ಇದೀಗ ರೂ. 250-00 ಗಳ ಡಿ.ಡಿ ಯನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಕಾರಣ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ದಾವಣಗೆರೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಅಪ್ಲಿಕೇಷನ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಉದ್ಯಮಶೀಲರ ಅರ್ಜಿಗಳನ್ನು ಪರಿಷ್ಕರಿಸಲಾಗುವುದು. ತದನಂತರ ಆಯ್ಕೆಯಾದ ಅರ್ಜಿಗಳನ್ನು ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಂಡಿಸಿ ಯೋಜನೆ ಅನುಮೋದನೆ ಪಡೆದ ನಂತರ ಕೆಐಎಡಿಬಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕ ರೂ. 205-00 ಗಳನ್ನು ಆನ್‍ಲೈನ್‍ನಲ್ಲಿ ಪಾವತಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜಯಪ್ರಕಾಶ್ ನಾರಾಯಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



