ದಾವಣಗೆರೆ: ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದು, ದಾವಣಗೆರೆ ಜಿಲ್ಲೆ ಕಾಂಗ್ರೆಸ್ ಮುಕ್ತ ಆಗುವುದರಲ್ಲಿ ಅನಿಮಾನವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಜನಸೇವಕ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಪಂ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಶೇ.58 ರಷ್ಟು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ. ಗೆದ್ದಿರುವ ಹಲವರು ನೂರಾರು ಜನರು ನಮ್ಮ ಪಕ್ಷಕ್ಕೆ ಬರುವ ನಿರೀಕ್ಷೆಗಳಿವೆ. ಶೀಘ್ರದಲ್ಲಿ ದಾವಣಗೆರೆ ಕಾಂಗ್ರೆಸ್ ಮುಕ್ತ ಜಿಲ್ಲೆ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಮಮಂದಿರ ನಿರ್ಮಾಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದೆ. ಅಲ್ಲದೇ ಕಾಶ್ಮೀರದಲ್ಲಿ 370 ವಿಧಿ ರದ್ಧುಗೊಳಿಸಿ, ಕಾಶ್ಮೀರವನ್ನು ವಶಕ್ಕೆ ಪಡೆಯುವ ಮೂಲಕ ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ 2,758 ಸ್ಥಾನಗಳಿಗೆ ನಡೆದ ಗ್ರಾಪಂ ಚುನಾವಣೆಯಲ್ಲಿ 1614 ಜನ ಬಿಜೆಪಿ ಬೆಂಬಲಿತರು ಗೆಲುವಿನ ನಗೆಬೀರಿದ್ದಾರೆ. ಗೆದ್ದಿರುವ ನೀವೆಲ್ಲರೂ ಜನಸೇವೆಯನ್ನೂ ಪ್ರ್ರಾಮಾಣಿಕವಾಗಿ ಮಾಡಬೇಕು. ಬಿಜೆಪಿ ಜಾತಿ, ಧರ್ಮವಿಲ್ಲದ ಅಭಿವೃದ್ಧಿಯನ್ನೇ ಮಂತ್ರ ಮಾಡಿಕೊಂಡಿರುವ ಪಕ್ಷ ಎಂದು ಹೇಳಿದರು.



